ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಿಂದಿ ಭಾಷೆಯ ಮಹತ್ವ ಹಾಗೂ ವಿವಿಧ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಹಿಂದಿಯನ್ನು ಬಳಸುವ ಮತ್ತು ಉತ್ತೇಜಿಸುವ ಕುರಿತು ವಿದ್ಯಾರ್ಥಿಗಳಿಗೆ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕಿ ಸುಖತಾ ಪ್ರಶಾಂತ್ ಸುವರ್ಣ ಮಾಹಿತಿ ನೀಡಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗವು ಭಾಷಾ ಸಂಘದ ಸಹಯೋಗದೊಂದಿಗೆ ಆಯೋಜಿಸಿದ ‘ಹಿಂದಿ ದಿವಸ್’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ದೀಪಾ, ಸಹಾಯಕ ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ ಪ್ರಾರ್ಥಿಸಿ, ಪ್ರತೀಕ್ಷಾ ಅತಿಥಿಗಳನ್ನು ಪರಿಚಯಿಸಿ, ರಿಷಿತಾ ಕಾರ್ಯಕ್ರಮ ನಿರೂಪಿಸಿ, ಶಿಫಾಶೇಖ್ ಸ್ವಾಗತಿಸಿ, ಇಶಿತಾ ಸಿದ್ದು ವಂದಿಸಿದರು.

