Kundapra.com ಕುಂದಾಪ್ರ ಡಾಟ್ ಕಾಂ

ಸಾಲಿಗ್ರಾಮ ಪಟ್ಟಣ ಪಂಚಾಯತ್ ಆಶ್ರಯದಲ್ಲಿ ಪೌರಕಾರ್ಮಿಕರ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಸಾಲಿಗ್ರಾಮ ಪಟ್ಟಣ ಪಂಚಾಯತ್ ಆಶ್ರಯದಲ್ಲಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. 

ಪೌರಕಾರ್ಮಿಕರಿಗೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮದ ಸಲುವಾಗಿ ದುಶ್ಚಟಗಳ ಬಗ್ಗೆ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಯಾದ ಮನೋವೈದ್ಯ ಡಾ. ಪ್ರಕಾಶ್ ತೋಳಾರ್ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ, ಮುಖ್ಯಾಧಿಕಾರಿ ಅಜಯ್ ಭಂಡಾರ್‌ಕಾರ್, ಉಪಾಧ್ಯಕ್ಷಕರಾದ ಗಿರಿಜಾ ಪೂಜಾರಿ, ಸ್ಥಾಯಿ ಸಮಿತಿ ಸದಸ್ಯರಾದ ಅನುಸೂಯ ಹೇರ್ಳೆ, ಸದಸ್ಯರಾದ ಸಂಜೀವ ದೇವಾಡಿಗ, ರಾಜು ಪೂಜಾರಿ ಇದ್ದರು.

ಈ ಹಿನ್ನಲ್ಲೆಯಲ್ಲಿ ಪೌರ ಕಾರ್ಮಿಕರಿಗೆ ವಿವಿಧ ಆಟೋಟ ಸ್ಫರ್ಧೆಯನ್ನು ಆಯೋಜಿಸಿ ಬಹುಮಾನವನ್ನು ನೀಡಲಾಯಿತು ಹಾಗೂ ಪಟ್ಟಣ ಪಂಚಾಯತ್‌ನ  ಸ್ವಚ್ಛತಾ ಸಿಬ್ಬಂದಿಯವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.  

ಪಟ್ಟಣ ಪಂಚಾಯತ್‌ನ ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ ವಿಜೇತರ ಪಟ್ಟಿಯನ್ನು ವಾಚಿಸಿದರು. ಪ್ರಭಾರ ಕಂದಾಯ ನಿರೀಕ್ಷಕ ಚಂದ್ರಶೇಖರ ಸೋಮಯಾಜಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Exit mobile version