Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಲ – ಸಹಾಯಧನ ಯೋಜನೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರಸಾಲ ಯೋಜನೆ ಹಾಗೂ ಸಾಂತ್ವನ ಯೋಜನೆಗಳಡಿ ಸಾಲ-ಸಹಾಯಧನ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಅರ್ಹ ಫಲಾನುಭವಿಗಳಿಂದ ವೆಬ್‌ಸೈಟ್ https://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಝಾದ್ ಭವನ, ಒಂದನೇ ಮಹಡಿ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-230370 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version