ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಮುಖ್ಯವಾಗಿದ್ದು. ಸೋಲು ಗೆಲುವಿನ ಕುರಿತು ಚಿಂತಿಸದೆ ಕ್ರೀಡಾಕೂಟದಲ್ಲಿ ಭಾಗವಹಿಸಿ. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಸರ್ವತೋಮುಖ ವಿಕಸನ ಸಾಧ್ಯ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕ ಅಧ್ಯಯನಕ್ಕೆ ಮಾತ್ರ ಸೀಮಿತವಾಗಬಾರದು ಕ್ರೀಡೆಯಲ್ಲಿ ಸಾಧನೆ ಮಾಡಬಹುದೆಂದು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಅವರು ಗುರುವಾರ ಶಾಲಾ ಶಿಕ್ಷಣ ಇಲಾಖೆ ಕುಂದಾಪುರ – ಸರಕಾರಿ ಪ್ರೌಢಶಾಲೆ ಹೆಸ್ಕುತ್ತೂರು ಇವರ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ 14 ಹಾಗೂ 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಕ್ರಿಕೆಟ್ ಪಂದ್ಯಾಟ 2025 ಇದರ ಕ್ರೀಡಾಕೂಟ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು ಸತ್ಯನಾರಾಯಣ ಜಿ., ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕ ಲೋಕೇಶ್.ಸಿ., ಶಿಕ್ಷಕರಾದ ಅಬ್ದುಲ್ ರವೂಫ್, ದೈಹಿಕ ಶಿಕ್ಷಣ ಶಿಕ್ಷಕ ಜಯಪ್ರಸಾದ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಅನುಷ್ಠಾನಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕ ಸಂಘಟನೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಸರ್ವ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟದ ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗ, ಸರಕಾರಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆ ಹೆಸ್ಕುತ್ತೂರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.