Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ದೇವಳಕ್ಕೆ ಸಚಿವ ಕೆ.ಹೆಚ್. ಮುನಿಯಪ್ಪ ಭೇಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೊಲ್ಲೂರು:
ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ಅವರು ಕುಟುಂಬ ಸಮೇತರಾಗಿ ಭೇಟಿ ‌ನೀಡಿದರು.

ಅವರು ದೇವಿಯ ದರ್ಶನ ಪಡೆದು ಚಂಡಿಕಾ ಹೋಮದಲ್ಲಿ ಭಾಗಿಯಾದರು. ಸಚಿವರನ್ನು ದೇವಳದ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಮತ್ತು ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಪ್ರಸಾದ ಗೌರವಿಸಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ರಮೇಶ್ ಗಾಣಿಗ, ಕೊಲ್ಲೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಾಯಕ ಆಚಾರ್ಯ ಸೇರಿದಂತೆ ಪಕ್ಷದ ಪ್ರಮುಖರು ಜೊತೆಗಿದ್ದರು.

Exit mobile version