ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಂದಿನ ಯುವ ಪೀಳಿಗೆಯು ಸಮಾಜದಲ್ಲಿ ಆರೋಗ್ಯ ಪೂರ್ಣವಾಗಿ ಬೆಳೆಯಲು ಅಗತ್ಯವಾದ ಆರೋಗ್ಯದ ಅರಿವು ಹೊಂದಿರಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಜಯಕರ್ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಎಚ್‌ಐವಿ / ಏಡ್ಸ್ ಕುರಿತ ಅರಿವು ಕಾರ್ಯಕ್ರಮದಲ್ಲಿ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕುಂದಾಪುರ ಸರಕಾರಿ ತಾಲೂಕು ಆಸ್ಪತ್ರೆಯ ಆರೋಗ್ಯ ಸಲಹೆಗಾರರಾದ ನಳಿನಾಕ್ಷಿ, ಎಚ್.ಐ.ವಿ./ಏಡ್ಸ್ ಕುರಿತು ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇಂಡಿಯನ್ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಯುವ ರೆಡ್‌ಕ್ರಾಸ್ ಘಟಕ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ಸ್ವಯಂ ಸೇವಕಿ ಸನ್ಮಿತ ಕಾರ್ಯಕ್ರಮ ನಿರೂಪಿಸಿ, ಮಾಲತಿ ಕುಂದರ್ ಧನ್ಯವಾದ ಅರ್ಪಿಸಿದರು.

