ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟ ಶ್ರೀ ರಾಜಶೇಖರ ದೇವಸ್ಥಾನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ, ಉಡುಪಿ ಜಿಲ್ಲಾ ಸಮಿತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಸೂರ್ಯ ನಮಸ್ಕಾರ, ದುರ್ಗಾ ನಮಸ್ಕಾರ ಕಾರ್ಯಕ್ರಮ ನಡೆಯಿತು.
ವ್ಯವಸ್ಥಾಪನ ಸಮಿತಿ ಸದಸ್ಯ ಚಂದ್ರ ಆಚಾರ್ ದೀಪ ಪ್ರಜ್ವಲಿಸಿ, ಉದ್ಘಾಟಿಸಿ, ಕ್ಷೇತ್ರದ ಕುರಿತು ವಿವರಿಸಿದರು.

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೋಟ ಶಾಖೆಯ ಪ್ರಮುಖರಾದ ರಮೇಶ್ ಪ್ರಭು, ಗೋಪಾಲ್ ಭಟ್, ವಿನಯ್ ಗಾಣಿಗ, ಉಡುಪಿ ಜಿಲ್ಲಾ ಶಿಕ್ಷಕ ಪ್ರಮುಖ ಬಿರಾದರ್ ಹಲವರು ಭಾಗಿಯಾದರು.