ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 2ರ ವರೆಗೆ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ. ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.
ತುರ್ತು ಸೇವೆಗೆ ಶುಲ್ಕ ರಹಿತ 1077, ದೂ.ಸಂಖ್ಯೆ: 0820-2574802, ತಹಶೀಲ್ದಾರರ ಕಚೇರಿಯ ಸಹಾಯವಾಣಿ ಸಂಖ್ಯೆಗಳಾದ ಉಡುಪಿ: 0820-2520417, ಕುಂದಾಪುರ: 08254-230357, ಕಾಪು: 0820-2551444, ಬ್ರಹ್ಮಾವರ: 0820-2560494 ಹಾಗೂ ಬೈಂದೂರು: 08254-251657 ಮತ್ತು ಉಡುಪಿ ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2593366 ಅಥವಾ 0820-2520306 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

