Site icon Kundapra.com ಕುಂದಾಪ್ರ ಡಾಟ್ ಕಾಂ

ನಾರಾಯಣ ಗುರುಗಳ ಭಾವಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಸಂಜಿತ್‌ ಎಂ. ದೇವಾಡಿಗ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಭಾರತೀಯ ಜನತಾ ಪಾರ್ಟಿ, ಹಿಂದುಳಿದ ವರ್ಗಗಳ ಮೋರ್ಚಾ ಬೈಂದೂರು ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ನಾರಾಯಣ ಗುರುಗಳ ಭಾವಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ದ್ವಿತೀಯ  ಸ್ಥಾನವನ್ನು ಗಳಿಸಿರುತ್ತಾನೆ.

ಈತ ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ.

ವಿದ್ಯಾರ್ಥಿಯ ಸಾಧನೆಗೆ ಶಾಲಾ ಎಸ್‌ಡಿಎಂಸಿ ಬಳಗ, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ

Exit mobile version