Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಚಂಡಿಕಾ ಯಾಗ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಶಾರದಾ ಮಹೋತ್ಸವದ 51ನೇ ವರ್ಷದ ಸಮಾರಂಭದ ಅಂಗವಾಗಿ ಶ್ರೀ ದೇವಿಯ ಪ್ರೀತ್ಯರ್ಥ ಹಾಗೂ ಲೋಕ ಕಲ್ಯಾಣಾರ್ಥ ಮತ್ತು ಗ್ರಾಮಾಭಿವೃದ್ಧಿಗೋಸ್ಕರ ಶ್ರೀ ಚಂಡಿಕಾ ಯಾಗ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಮಂಗಳವಾರ ಜರಗಿತು.

ಪುರೋಹಿತರಾದ ವೇದಮೂರ್ತಿ ಜಿ. ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು.

ರಾಜ ಪೂಜಾರಿ ದಂಪತಿ, ಶಿವಾನಂದ ಗಾಣಿಗ ದಂಪತಿ ಹಾಗೂ ರಘುರಾಮ ಪೂಜಾರಿ ದಂಪತಿ ಯಾಗದ ಯಜಮಾನಿಕೆ ವಹಿಸಿದ್ದರು. ಸಮಿತಿಯ ಅಧ್ಯಕ್ಷ ಶೇಖರ ಜಿ., ಪ್ರಧಾನ ಕಾರ್ಯದರ್ಶಿ ಪ್ರಶಾಂತ ಎಸ್‌ಆರ್‌ಜಿ., ಕಾರ್ಯದರ್ಶಿ ಎಂ. ಸಂದೀಪ ಖಾರ್ವಿ, ಮಹಿಳಾ ಮಂಡಳಿ ಅಧ್ಯಕ್ಷೆ ರೇಣುಕಾ ವಾಸುದೇವ ಶೇರುಗಾರ್, ಶ್ರೀ ಶಾರದೋತ್ಸವ ಸಮಿತಿ ಮತ್ತು ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು, ಭಜಕರು, ಮತ್ತಿತರರು ಉಪಸ್ಥಿತರಿದ್ದರು.

Exit mobile version