Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜು: ಸರಸ್ವತಿ ಹಾಗೂ ಶಾರದಾ ಪೂಜೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಗಣದಲ್ಲಿರುವ ಸರಸ್ವತಿ ದೇವರ ಮೂರ್ತಿಗೆ ನವರಾತ್ರಿಯ ಸಂದರ್ಭ ವಿಶೇಷ ಪೂಜೆ ಸಲ್ಲಿಸಲಾಯಿತು.

ಗ್ರಂಥಾಲಯದಲ್ಲಿ ಶಾರದಾ ಪೂಜೆ ಕಾರ್ಯಕ್ರಮವನ್ನು ಭಜನಾ ಕೀರ್ತನೆಯ ಮೂಲಕ ಆಚರಿಸಲಾಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರಾದ ಗಿರಿರಾಜ್ ಭಟ್ ಪೂಜಾ ಕಾರ್ಯ ನೆರವೇರಿಸಿದರು. 

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಮುಖ್ಯ ಗ್ರಂಥಪಾಲಕ ಮಹೇಶ್ ನಾಯ್ಕ್, ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version