Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಕಾರ್ಯಧ್ಯಕ್ಷ ಕರ್ನಾಟಕ ಸರಕಾರದ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ಇವರ ಆಪ್ತ ಸಹಾಯಕ ರಾಜಶೇಖರ ಮೆಣಸಿನಕಾಯಿ ಹಾಗೂ ಕರ್ನಾಟಕ ಜಂಗಮ ಕ್ಷೇಮಭಿವೃದ್ಧಿ ಮಹಾಸಭಾದ ರಾಜ್ಯಾಧ್ಯಕ್ಷ ಬಂಗಾರೇಶ್ ಹಿರೇಮಠ್, ಕೆಪಿಸಿಸಿ ಪದಾಧಿಕಾರಿ ಸುರೇಶ ಸವಣೂರ, ಬಾಂಡ್ ಉದ್ಯಮಿ ರಫೀಕ್ ದೊಡ್ಡಮನಿ ಭೇಟಿ ನೀಡಿದರು.

ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಶಾಲು ಹೊದಿಸಿ ದೇವಿಯ  ಪ್ರಸಾದವನ್ನು ನೀಡಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುಬ್ರಾಯ ಜೋಗಿ, ಸುಧಾ ಎ. ಪೂಜಾರಿ, ಸುಭಾಸ್ ಶೆಟ್ಟಿ, ಗಣೇಶ್ ಕೆ ನೆಲ್ಲಿಬೆಟ್ಟು, ಜ್ಯೋತಿ ಡಿ ಕಾಂಚನ್, ರತನ್ ಐತಾಳ್, ಕಾಂಗ್ರೆಸ್ ಮುಖಂಡರಾದ ಉಣಕಲ್ ಪ್ರಕಾಶ್ ಶೆಟ್ಟಿ, ಅಪ್ಪಣ್ಣ ಕಮ್ಮಾರ, ಸೂರ್ಯಕಾಂತ್ ಗೋಡ್ಕೆ ಹಾಗೂ ದೇವಸ್ಥಾನದ ವ್ಯವಸ್ಥಾಪಕ ಗಣೇಶ್ ಹೊಳ್ಳ ಉಪಸ್ಥಿತರಿದ್ದರು.

Exit mobile version