Site icon Kundapra.com ಕುಂದಾಪ್ರ ಡಾಟ್ ಕಾಂ

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ ಒಟ್ಟು 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್‌ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಇದುವರೆಗೆ 392 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅವುಗಳು ಪರಿಶೀಲನೆಗೆ ಅಲಭ್ಯವಾಗಿದ್ದು ಅರ್ಜಿ ಸಲ್ಲಿಕೆಯನ್ನು ಅ.20 ರವರೆಗೆ ವಿಸ್ತರಿಸಲಾಗಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆಯನ್ನು ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd ನಲ್ಲಿ ನಮೂದಿಸಿ ಮೊದಲಿಗೆ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಸಹಿ ಹಾಗೂ ಭಾವಚಿತ್ರವನ್ನು ಅಪ್ ಲೋಡ್ ಮಾಡಿ ಕಡ್ಡಾಯವಾಗಿ ಇ-ಸೈನ್ ಹಾಕಿದ ಬಳಿಕ ಮೂರನೇ ಹಂತದಲ್ಲಿ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ಅಪ್ ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಅರ್ಜಿಗಳನ್ನು ಮುದ್ರಿಸಬಹುದಾಗಿದ್ದು, ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version