ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ದಾನಿಗಳ ಸಹಕಾರದೊಂದಿಗೆ ರೂಪಾಯಿ 60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊರಗ ಕಾಲೋನಿಯ ಎಂಟು ಹೊಸ ಮನೆ ನಿರ್ಮಾಣಕ್ಕೆ ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ಸಹಾಯಧನ ಚೆಕ್ ವಿತರಣೆ ಕಾರ್ಯಕ್ರಮ ಕೊರಗರ ಕಾಲೋನಿಯಲ್ಲಿ ನಡೆಯಿತು.
ರೋಟರಿ ಕ್ಲಬ್ ಕೋಟ ಸಿಟಿಯ ಅಧ್ಯಕ್ಷ ಪ್ರಕಾಶ್ ಹಂದಟ್ಟು ಅವರು ಮಾತನಾಡಿ, ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೊರಗರ ಎಂಟು ಹೊಸ ಮನೆ ನಿರ್ಮಾಣ ಕಾರ್ಯ ಶ್ಲಾಘನೀಯ ನಮ್ಮ ರೋಟರಿ ಕ್ಲಬ್ ಕೋಟ ಸಿಟಿ ಸದಸ್ಯರ ಸಹಕಾರದೊಂದಿಗೆ ಇಂದು ಸಹಾಯ ಧನ ಚೆಕ್ ವಿತರಿಸುತ್ತಿರುವ ಬಗ್ಗೆ ಖುಷಿ ಇದೆ. ಇಲ್ಲಿಯ ಮೂಲ ನಿವಾಸಿಗಳಿಗೆ ಹೊಸ ಎಂಟು ಮನೆ ನಿರ್ಮಿಸಿ ಕೊಡುವ ಮೂಲಕ ಕೋಟತಟ್ಟು ಗ್ರಾಮ ಪಂಚಾಯತ್ ಇತರ ಗ್ರಾಮ ಪಂಚಾಯತ್‌ಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಬಾರಿಕೆರೆ ಅವರು ಮಾತನಾಡಿ, ತಳಮಟ್ಟದ ಸಮುದಾಯವನ್ನು ಮೇಲಕ್ಕೆತ್ತುವ ಕಲ್ಯಾಣ ಕಾರ್ಯಕ್ಕೆ ಸಹಾಯ ಧನ ನೀಡಿದ ರೋಟರಿ ಕ್ಲಬ್ ಕೋಟ ಸಿಟಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ರೋಟರಿ ವಲಯ 2ರ ಸಹಾಯಕ ಗವರ್ನರ್ ಶ್ಯಾಮಸುಂದರ್ ನಾಯರಿ, ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್, ಕಾರ್ಯದರ್ಶಿ ಕೃಷ್ಣ ಪೂಜಾರಿ ಪಿ., ಡಾ. ಗಣೇಶ್, ಉದಯ್ ಕುಮಾರ್ ಶೆಟ್ಟಿ, ವಿಷ್ಣುಮೂರ್ತಿ ಉರಾಳ, ಶಿವಾನಂದ ನಾಯರಿ, ಪಂಚಾಯತ್ ಸದಸ್ಯ ವಾಸು ಪೂಜಾರಿ ಕೆ., ಸೀತಾ, ವಿದ್ಯಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ನಿಯೋಜಿತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಶೆಟ್ಟಿ ಮತ್ತು ಕೊರಗ ಕಾಲೋನಿಯ ನಿವಾಸಿಗಳು ಉಪಸ್ಥಿತರಿದ್ದರು.