Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ ಪಂಚವರ್ಣ ಸಂಘಟನೆಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಕೋಟದ ಪಂಚವರ್ಣ ಸಂಘಟನೆಗೆ ಪರಿಸರ ಕಾಳಜಿಯ ಕಾರ್ಯಕ್ರಮವನ್ನು ಗುರುತಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದ.ಕ ಮತ್ತು ಉಡುಪಿ ಜಿಲ್ಲೆ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಿ ಗೌರವಿಸಿದೆ

ಸದಾ ಪರಿಸರಸ್ನೇಹಿ ಆಂದೋಲನ, ಜಾಗೃತಿ, ಕಾರ್ಯಕ್ರಮಗಳ ಮೂಲಕ ಮನೆಮಾತಾದ ಕೋಟದ ಪಂಚವರ್ಣ ಸಂಘಟನೆಯ ಕಾರ್ಯವೈಖರಿಯನ್ನು ಗುರುತಿಸಿ ಸೋಮವಾರ ರಾಜ್ಯ ಸರಕಾರದ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಮಂಗಳೂರಿನ ಸಹ್ಯಾದ್ರಿ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಪಂಚವರ್ಣದ ಪರವಾಗಿ ಸಂಘದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ಪ್ರಶಸ್ತಿ ಸ್ವೀಕರಿಸಿದರು.

Exit mobile version