Kundapra.com ಕುಂದಾಪ್ರ ಡಾಟ್ ಕಾಂ

ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿಗೆ 17ನೇ ಬಾರಿ ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ
: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ.

ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಪಡೆಯಿತು.

ವೈಯಕ್ತಿಕ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‌ನ ರಾಹುಲ್, ಬೆಸ್ಟ್ ಸೆಟ್ಟರ್ ಪ್ರಶಸ್ತಿಯನ್ನು ಆಳ್ವಾಸ್‌ನ ಪುನೀತ್ ಹಾಗೂ ಬೆಸ್ಟ್ ಲಿಬ್ರೊ ಪ್ರಶಸ್ತಿಯನ್ನು ಆಳ್ವಾಸ್‌ನ ಮಂಜುನಾಥ್ ಪಡೆದರು.

ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Exit mobile version