Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜು: ರೋವರ್ಸ್ & ರೆಂಜರ್ಸ್‌ ಓರಿಯಂಟೇಶನ್ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ರೋವರ್ಸ್ & ರೇಂಜರ್ಸ್ ಸ್ವಯಂ ಸೇವಕರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಕಾಲೇಜಿನ ಎ.ವಿ. ಹಾಲ್ ನಲ್ಲಿ ಇತ್ತೀಚಿಗೆ ನಡೆಯಿತು.

ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ, ರೇಂಜರ್ ರಾಜ್ಯ ಪುರಸ್ಕಾರ ಪದವಿ ಪುರಸ್ಕೃತ ಸಮೃದ್ಧಿ ಕಿಣಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಸ್ಕೌಟ್ & ಗೈಡ್ಸ್ ನ ಹಿನ್ನೆಲೆ ಹಾಗೂ ಯುವ ಸಮುದಾಯ ಸ್ಕೌಟ್ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಸಿಗುವ ಪ್ರಯೋಜನಗಳ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ರೇಂಜರ್ ಲೀಡರ್ ಜೋಸ್ಲಿನ್ ಡಿ. ಅಲ್ಮೇಡಾ, ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ನೂತನ ಕಾರ್ಯದರ್ಶಿಯಾದ ದೀಪಾ ಪೂಜಾರಿ ಉಪಸ್ಥಿತರಿದ್ದರು.

ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. 

Exit mobile version