Site icon Kundapra.com ಕುಂದಾಪ್ರ ಡಾಟ್ ಕಾಂ

ಬ್ರಹ್ಮಾವರ: ಕೋಳಿ ಅಂಕಕ್ಕೆ ಪೊಲೀಸರ ದಾಳಿ – ಇಬ್ಬರು ಬಂಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಬ್ರಹ್ಮಾವರ ತಾಲೂಕಿನ ಹೇರಾಡಿ ಗ್ರಾಮದ ಕೂಡ್ಲಿ ಸಮೀಪ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೋಳಿಗಳ ಕಾಲಿಗೆ ಕತ್ತಿ ಕಟ್ಟಿ ಮನೋರಂಜನೆ ಹಾಗೂ ಹಣ ಪಣವಾಗಿ ಕಟ್ಟಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಬ್ರಹ್ಮಾವರ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಾದ ಪ್ರಶಾಂತ್ ಮತ್ತು ರಾಘವೇಂದ್ರ. ಇತರ ಮಂದಿ ಓಡಿ ಹೋಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಆರೋಪಿಗಳಿಂದ ₹2,120 ನಗದು, ಎರಡು ಕೋಳಿಗಳು, ಕೋಳಿಯ ಕಾಲಿಗೆ ಕಟ್ಟಿದ್ದ ಬಾಲ್‌ಗಳು ಹಾಗೂ ನೈಲಾನ್ ಹಗ್ಗಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Exit mobile version