Site icon Kundapra.com ಕುಂದಾಪ್ರ ಡಾಟ್ ಕಾಂ

ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ದೀಪಾವಳಿ ಹಬ್ಬ ಆಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಅನುಪಮಾ ಎಸ್. ಶೆಟ್ಟಿ ಅವರು ದೀಪವನ್ನು ಬೆಳಗುವ ಮೂಲಕ ದೀಪಾವಳಿ ಹಬ್ಬವನ್ನು ವಿದ್ಯಾ ಸಂಸ್ಥೆಯ ಆವರಣದಲ್ಲಿ ಆಚರಿಸಿ ಮಾತನಾಡಿ, ಕತ್ತಲಿನಿಂದ ಬೆಳಕಿನೆಡೆಗೆ ಸಾಗುತ್ತಾ, ಅಂಧಕಾರದಿಂದ ಜ್ಞಾನದ ಕಡೆಗೆ ನಮ್ಮ ಜೀವನ ಕ್ರಮವನ್ನು ಹೊತ್ತು ನಡೆಯಬೇಕು. ದೀಪಾವಳಿ ಹಬ್ಬವು ನಮ್ಮ ದೇಶೀಯ ಸಂಸ್ಕೃತಿಯನ್ನು ಅರ್ಥಪೂರ್ಣವಾಗಿ ಬಿಂಬಿಸಿದ ಹಬ್ಬವಾಗಿದೆ. ಸುಸಂಸ್ಕೃತಿಯ ಜೀವನ ಕ್ರಮಕ್ಕಾಗಿ ನಾವೆಲ್ಲರೂ ಹಣತೆಯನ್ನು ಹಚ್ಚಿ ನಮ್ಮ ಒಳಗಿನ ಕತ್ತಲನ್ನು ದೂರ ಮಾಡೋಣ ಎಂದರು.

ಗುರುಕುಲ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಡಾ. ರೂಪಾಶಣೈ ಅವರು ದೀಪಾವಳಿ ಹಬ್ಬದ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಶುಭ ಕೋರಿದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ವಿದ್ಯಾರ್ಥಿ ಪೃಥ್ವೀಶ್ ಎಸ್. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Exit mobile version