Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರದ ಗೌರವ ಕಾಪಾಡುವಲ್ಲಿ ಚೆನ್ನಮ್ಮರ ಬದುಕು ಸಮರ್ಪಣೆ: ಕೋಟ ಶ್ರೀನಿವಾಸ ಪೂಜಾರಿ
    ಉಡುಪಿ ಜಿಲ್ಲೆ

    ರಾಷ್ಟ್ರದ ಗೌರವ ಕಾಪಾಡುವಲ್ಲಿ ಚೆನ್ನಮ್ಮರ ಬದುಕು ಸಮರ್ಪಣೆ: ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರಾಷ್ಟ್ರಭಕ್ತಿ, ಶೌರ್ಯ, ಶ್ರದ್ಧೆ, ಹೋರಾಟಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚೆನ್ನಮ್ಮ ಎನ್ನುವುದು ನಮ್ಮೆಲ್ಲರ ಹೆಮ್ಮೆ. ಬೆಳಗಾವಿ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಕಿತ್ತೂರು ರಾಣಿ ಚೆನ್ನಮ್ಮ ರಾಷ್ಟ್ರದ ಗೌರವವನ್ನು ಕಾಪಾಡುವಲ್ಲಿ ತಮ್ಮ ಬದುಕನ್ನು ಸಮರ್ಪಣೆ ಮಾಡಿದರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಿತ್ತೂರು ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಮಾತನಾಡಿದರು. 

    ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಚೆನ್ನಮ್ಮ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಸಂಘಟನ ಶಕ್ತಿಯನ್ನು ಬೆಳೆಸಿ, ಭಾರತದ ಸ್ವಾತಂತ್ರ್ಯ ಹೋರಾಟದ ಪ್ರಥಮ ಮಹಿಳೆಯರ ಸಾಲಿಗೆ ಸೇರ್ಪಡೆಗೊಂಡು ಆದರ್ಶಮಯ ವ್ಯಕ್ತಿಯಾಗಿ, ಶಕ್ತಿಯಾಗಿ, ಮಹಿಳೆಯರಿಗೆ ಸ್ಫೂರ್ತಿಯಾದರು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್ ಎ ಸುವರ್ಣ ಅವರು ಮಾತನಾಡಿ, ದೇಶ ಕಟ್ಟುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಚಾರ ಹಾಗೂ ಬದುಕಿದ ರೀತಿ ಅವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕು ಎಂದರು.

    ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿರಂಜನ್ ಯು.ಸಿ ಕಿತ್ತೂರು ರಾಣಿ ಚೆನ್ನಮ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಚಿಕ್ಕಮಠ, ಜಗನ್ನಾಥ ಪಣಸಾಲೆ ಹಾಗೂ  ಮತ್ತಿತರರು ಉಪಸ್ಥಿತರಿದ್ದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ಬಿ ಕೋಟ್ಯಾನ್ ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪಣ ತೊಡೋಣ: ಎಂ. ಪುರುಷೋತ್ತಮ್

    13/06/2026

    ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ

    13/06/2026

    ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ

    12/06/2026
    Leave A Reply Cancel Reply

    12 + eight =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    • ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.