Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸಾಂಪ್ರದಾಯಿಕವಾಗಿ ನಡೆಯುವ ದೀಪಾವಳಿ ಹಬ್ಬ ಕೃಷಿ ಸಂಬಂಧಿಯಾಗಿದ್ದು, ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ದೀಪಾವಳಿಯ ಸಂದರ್ಭದಲ್ಲಿ ನಡೆಯುವ ಬಲೀಂದ್ರ ಪೂಜೆ, ಲಕ್ಷ್ಮಿ ಪೂಜೆ, ತುಳಸಿ ಪೂಜೆ, ಗೋಪೂಜೆ ಈ ಎಲ್ಲಾ ಆಚರಣೆಗಳು ವಿದ್ಯಾರ್ಥಿಗಳಿಗೆ ತಿಳಿದಿರಬೇಕು ಎಂದು ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್ ಶೆಟ್ಟಿ ಹೇಳಿದರು.

ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ದೀಪಾವಳಿ ಸಂಭ್ರಮ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ವಿಭಾಗದ ಪ್ರಾಧ್ಯಾಪಕರಾದ ರಶ್ಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ಬಹುಮಾನಿತರ ಪಟ್ಟಿ ವಾಚಿಸಿದರು. ಕಾರ್ಯಕ್ರಮದ ಸಂಯೋಜಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿನಿ ಶರಣ್ಯ ಶೆಟ್ಟಿ ನಿರೂಪಿಸಿ,  ಪ್ರವೀಣಾ ಎಮ್. ಪೂಜಾರಿ ವಂದಿಸಿದರು.

ಈ ಸಂದರ್ಭ ಲಕ್ಷ್ಮಿ ಪೂಜೆ, ಗೋಪೂಜೆ, ಬಲೀಂದ್ರ ಪೂಜೆಯನ್ನು ಕಾಲೇಜಿನ ಆವರಣದಲ್ಲಿ ನೆರವೇರಿಸಲಾಯಿತು.

Exit mobile version