Kundapra.com ಕುಂದಾಪ್ರ ಡಾಟ್ ಕಾಂ

ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವಿವಿಧ ಉಚಿತ ತಪಾಸಣಾ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ರೋವರ‍್ಸ್ ರೇಂಜರ‍್ಸ್, ಎನ್.ಸಿ.ಸಿ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಎನ್.ಸಿ.ಡಿ ವಿಭಾಗ ಸಾರ್ವಜನಿಕ ಆಸ್ಪತ್ರೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಪ್ರಸಾದ್ ನೇತ್ರಾಲಯ ಉಡುಪಿ, ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಬಸ್ರೂರು, ರಥಬೀಧಿ ಪ್ರೆಂಡ್ಸ್ ಬಸ್ರೂರು, ಬಸ್ರೂರು ಸ್ಪೋಟ್ಸ್ ಕ್ಲಬ್, ಮಹಿಷಮರ್ಧಿನಿ ಮೊಗವೀರ ಯುವಕ ಮಂಡಲ ಬಸ್ರೂರು, ನ್ಯೂ ಸ್ಪೋಟ್ಸ್ ಕ್ಲಬ್ ಬಳ್ಕೂರು ಇವರ ಸಹಯೋಗದಲ್ಲಿ ಬ್ರಹತ್ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ನೇತ್ರ ತಪಾಸಣಾ ಶಿಬಿರವು ಕಾಲೇಜಿನ ಆವರಣದಲ್ಲಿ ಶನಿವಾರದಂದು ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕ್ರೀಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಶಾರದಾ ಕಾಲೇಜಿನಲ್ಲಿ ವಿವಿಧ ಸಂಘಟನೆಗಳ ಮೂಲಕ ರಕ್ತದಾನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ ಕೆ.  ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಕಾಲೇಜು ಮಟ್ಟದಲ್ಲಿ ಇಂತಹ ಶಿಬಿರ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ   ಡಾ. ಚಂದ್ರಾವತಿ ಶೆಟ್ಟಿ, ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾ. ಪ್ರೇಮ್ ಕುಮಾರ್ ಮತ್ತು ವಿವಿಧ ಸಂಘನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕರಾದ ಮುರಳೀಧರ ಹೆಗ್ಡೆ ಸ್ವಾಗತಿಸಿ, ಉಪನ್ಯಾಸಕ ರಾಘವೇಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದ, ಕಾಲೇಜಿನ ಆಡಳಿತಾಧಿಕಾರಿ ಡಾ. ಮೋಹನ್ ಕೆ.ಎನ್ ವಂದಿಸಿದರು. 

Exit mobile version