ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಖಾದ್ಯ ಮತ್ತು ಪಾನೀಯ ತಯಾರಿಕಾ ಸ್ಪರ್ಧೆಯನ್ನು ಏರ್ಪಡಿಸಲಾಯಿತು.
ಈ ಸ್ಪರ್ಧೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ ಅವರು ಈ ಸ್ಪರ್ಧೆಯನ್ನು ವೀಕ್ಷಿಸಿದರು.

