ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕಾವ್ರಾಡಿ ಗ್ರಾಮದ ಮರಾಸಿ ರಸ್ತೆಯ ಹಾಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್ – ಬಾಹರ್ ಎಂಬ ಇಸ್ಪೀಟು ಆಟವಾಡುತ್ತಿದ್ದ ನಾಲ್ವರನ್ನು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ತಮ್ಮ ಸ್ವಂತ ಲಾಭಕ್ಕಾಗಿ ಇಸ್ಪೀಟು ಎಲೆಗಳಿಂದ ಅಂದರ್ – ಬಾಹರ್ ಎಂಬ ಇಸ್ಪೀಟು ಆಟವಾಡುತ್ತಿದ್ದವರ ಸಂದರ್ಭ ಪೊಲೀಸರು ದಾಳಿ ನಡೆಸಿದ್ದು ಇಸ್ಪೀಟ್ ಜುಗಾರಿ ಆಡುತ್ತಿದ್ದ 4 ಜನರನ್ನು ವಶಕ್ಕೆ ಪಡೆದಿದ್ದಾರೆ. ಬಾಳಿಕೆರೆಯ ಅನಿಲ್, ಪೂರ್ಣೇಶ್, ಯೋಗೀಶ್, ಕೆಂಚನೂರಿನ ರಘು ಎಂಬುವವರನ್ನು ಬಂಧಿಸಲಾಗಿದೆ. ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ್ದ ವಸ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

