ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೂಡಬಿದ್ರೆಯ ಆಳ್ವಾಸ್ ಪಿಯು ಕಾಲೇಜಿನ ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥಮೆಟಿಕ್ – 2025 ಕಾಂಪಿಟೇಷನ್ ಸ್ಪರ್ಧೆಯಲ್ಲಿ ಛಾಯಾ ವಿಆರ್ ತೃತೀಯ ಸ್ಥಾನವನ್ನು ಪಡೆದಿದ್ದಾಳೆ.
ಕುಂದಾಪುರದ ಎಚ್‍ಎಮ್‍ಎಮ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿಯಾಗಿರುವ ಛಾಯಾ, ಛಾಯಾಗ್ರಾಹಕ ವಿಶ್ವನಾಥ ಮುನ್ನ ಹಾಗೂ ರಜನಿ ದಂಪತಿಯ ಪುತ್ರಿ.
ಈಕೆ ಪ್ರಸನ್ನ, ಮಹಾಲಕ್ಷ್ಮೀ ಮತ್ತು ದೀಪಾ ಅವರಿಂದ ತರಬೇತಿ ಪಡೆದಿರುತ್ತಾಳೆ.

