Site icon Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆಯಲ್ಲಿ ಸದ್ವಿನ್‌ಗೆ ಪ್ರಥಮ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್  ಸ್ಪರ್ಧೆಯು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ತಲ್ಲೂರಿನ ಸದ್ವಿನ್ ಎಸ್. ಆಚಾರ್ಯ ಪ್ರಥಮ ಸ್ಥಾನ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.

ಈತ ಜಯಶ್ರೀ ಮತ್ತು ಸದಾನಂದ ಆಚಾರ್ಯ ಅವರ ಪುತ್ರರಾಗಿದ್ದಾರೆ. ಪ್ರಸ್ತುತ ತಲ್ಲೂರು ಜಯರಾಣಿ ಆಂಗ್ಲ ಮಾದ್ಯಮ ಶಾಲೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. 

ಅವರಿಗೆ ಕುಂದಾಪುರ ಸೆಂಟರ್ ನ  ಮಖ್ಯಸ್ಥ ಪ್ರಸನ್ನ ಕೆ. ಬಿ., ಬೋಧಕಿ  ಮಹಾಲಕ್ಷ್ಮಿ ಮತ್ತು ದೀಪಾ ಅವರು ತರಬೇತಿ ನೀಡಿರುತ್ತಾರೆ.

Exit mobile version