ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಎ.ವಿ. ಬಾಲಿಗ ಸ್ಮಾರಕ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಿತು.
ಕಾರ್ಯಕ್ರಮವು ದೀಪ ಪ್ರಜ್ವಲನ ಮತ್ತು ಅಧಿಕೃತ ಉದ್ಘಾಟನೆಯೊಂದಿಗೆ ಆರಂಭವಾಯಿತು.
ವಿದ್ಯಾರ್ಥಿನಿ ಟೆಸ್ಕಾ ಅವರು ದಿನದ ಮಹತ್ವವನ್ನು ವಿವರಿಸಿ, 2025ರ ವಿಶ್ವ ಮಾನಸಿಕ ಆರೋಗ್ಯ ದಿನದ ಧ್ಯೇಯ “ಸೇವೆಗಳ ಪ್ರವೇಶ: ಆಪತ್ತು ಮತ್ತು ತುರ್ತು ಪರಿಸ್ಥಿತಿಯಲ್ಲಿನ ಮಾನಸಿಕ ಆರೋಗ್ಯ” ಎಂಬುದನ್ನು ಉಲ್ಲೇಖಿಸಿದರು.
ಕಾರ್ಯಕ್ರಮದಲ್ಲಿ ಎ.ವಿ. ಬಾಳಿಗ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಸುರೇಶ್ ಹಾಗೂ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಚೇತನಾ ಆರ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸಿನ್ಸಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ನಾಟಕವನ್ನು ಪ್ರದರ್ಶಿಸಿ, ಮಾನಸಿಕ ಆರೋಗ್ಯ ಜಾಗೃತಿ ಮತ್ತು ಸಮುದಾಯದ ಕಲ್ಯಾಣದ ವಿವಿಧ ಅಂಶಗಳನ್ನು ಒತ್ತಿ ಹೇಳಿದರು.

