Site icon Kundapra.com ಕುಂದಾಪ್ರ ಡಾಟ್ ಕಾಂ

ಹಿಂದುಸ್ತಾನಿ ವಾದ್ಯ ಸಂಗೀತದಲ್ಲಿ ಶಾಮ್ ಪೂಜಾರಿಗೆ ಪ್ರಥಮ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ರಾಗ ತರಂಗ ಮಂಗಳೂರು, ಭಾರತೀಯ ವಿದ್ಯಾ ಭವನ ಮಂಗಳೂರು ಇದರ ಸಹಯೋಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಶಾಲೆಗಳಿಗೆ ನಡೆಸಿದ ’ಬಾಲಪ್ರತಿಭಾ ಅನ್ವೇಷಣೆ -2025’ ಜಿಲ್ಲಾ ಮಟ್ಟದ ಶಾಲಾ ಮಕ್ಕಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹಿಂದುಸ್ತಾನಿ ವಾದ್ಯ ಸಂಗೀತ (ಕೊಳಲು) ದಲ್ಲಿ ಗಂಗೊಳ್ಳಿಯ ಎಸ್. ವಿ. ಇಂಗ್ಲೀಷ್ ಆಂಗ್ಲ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಮ್ ಜಿ.ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದಿದ್ದಾನೆ.

ಈತ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಹಾಗೂ ಪ್ರಾಧ್ಯಾಪಕಿ ಮಾಲತಿ ಗಣೇಶ ದಂಪತಿ ಪುತ್ರ.

Exit mobile version