Kundapra.com ಕುಂದಾಪ್ರ ಡಾಟ್ ಕಾಂ

ಕಾಂಗ್ರೆಸ್ ಬಂಡಾಯ, ಸ್ಥಳೀಯಾಡಳಿತಕ್ಕೆ ಸಕಾರಾತ್ಮಕ ಸ್ಪಂದನೆಯೇ ತನಗೆ ವರ: ಕೋಟ ಪೂಜಾರಿ

ಕುಂದಾಪುರ: ಈ ಚುನಾವಣೆಯಲ್ಲಿ ರಾಜಕೀಯ ಪಕ್ಷವಾಗಿ ಬಿಜೆಪಿ ವ್ಯವಸ್ಥಿತ ಕಾರ್ಯ ಯೋಜನೆ ರೂಪಿಸಿದೆ. ಕಾಂಗ್ರೆಸ್‌ನಲ್ಲಿರುವ ಆಂತರಿಕ ಬಂಡಾಯದ ಗೊಂದಲ ಒಂದಷ್ಟು ಮತಗಳು ನಮ್ಮತ್ತ ಬರಲು ಪ್ರೇರಣೆ ನೀಡುತ್ತದೆ ಎಂದು ವಿಧಾನ ಪರಿಷತ್‌ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಕುಂದಾಪುರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಎರಡು ಅವಧಿಯಲ್ಲಿ ವಿಧಾನ ಪರಿಷತ್‌ನ ಸದಸ್ಯನಾದ ಅನಂತರ ನಮ್ಮದೇ ಸರಕಾರ ಇರುವಾಗ ಕರ್ನಾಟಕ ರಾಜ್ಯದ ಇತಿಹಾಸಧಿದಲ್ಲೇ ಪ್ರಥಮವಾಗಿ ಗ್ರಾ.ಪಂ. ಸದಸ್ಯರಿಗೆ ಗೌರವ ಧನ ನೀಡುವ ಬಗ್ಗೆ ಯೋಜನೆ ಕಾರ್ಯರೂಪಕ್ಕೆ ಬಂದಿದೆ.

ಸ್ಥಳೀಯಾಡಳಿತ ಸಂಸ್ಥೆಗಳಿಗೆ ಒಂದಷ್ಟು ಶಕ್ತಿ ನೀಡಬೇಕು, ತಾ.ಪಂ. ನಗರಸಭೆ, ಪುರಸಭೆಗಳಿಗೆ ಅನುದಾನ ಹೆಚ್ಚಿಸಬೇಕು ಮತ್ತು ಸ್ಥಳೀಯಾಡಳಿತದ ಎಲ್ಲ ಸಮಸ್ಯೆಗಳಿಗೆ ಪರಿಹಾರ ತಂದುಕೊಡಬೇಕು ಎನ್ನುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ ಎಂದು ಅವರು ಹೇಳಿದರು. (ಕುಂದಾಪ್ರ ಡಾಟ್ ಕಾಂ)

ಪಂಚಾಯತ್‌ರಾಜ್‌ ವ್ಯವಸ್ಥೆಯಲ್ಲಿ ಸ್ಥಳೀಯಾಡಳಿತಗಳಿಗೆ ಸ್ವಾಯತ್ತೆ ನೀಡಬೇಕು ಎನ್ನುವ ಸಂವಿಧಾನದ 73ನೇ ತಿದ್ದುಪಡಿಯಲ್ಲಿ ಹೇಳಲಾದ ಎಲ್ಲ ಅಂಶಗಳು ಇನ್ನೂ ಜಾರಿಯಾಗದೆ ಇರುವ ಕುರಿತು ಬೇಸರವಿದೆ. ಶಾಸಕ ರಮೇಶ್‌ ಕುಮಾರ ಅವರ ವರದಿಯಲ್ಲಿ ಹೆಚ್ಚಿನ ಅಂಶಗಳನ್ನು ಜಾರಿಗೊಳಿಸಲು ಸರಕಾರ ತೀರ್ಮಾನಿಸಿರುವುದರಿಂದ ಈ ಎರಡು ವರದಿಗಳ ಸಮಗ್ರ ಅನುಷ್ಠಾನದ ಕುರಿತು ವಿಧಾನ ಮಂಡಲದ ಒಳಗೆ ಹಾಗೂ ಹೊರಗೆ ಪ್ರಾಮಾಣಿಕವಾಗಿ ಹೋರಾಟ ನಡೆಸಲು ಬದ್ಧನಿದ್ದೇನೆ. ಒಟ್ಟಾರೆ ಬಡವರ ಕಲ್ಯಾಣಧಿಕ್ಕಾಗಿ ಸದನದಲ್ಲಿ ಸಿಕ್ಕ ಅವಕಾಶಗಳಲ್ಲಿ ಅವರ ಧ್ವನಿಯಾಗಿ ಮಾತನಾಡಿದ್ದೇನೆ, ಚರ್ಚೆ ನಡೆಸಿದ್ದೇನೆ ಎಂದರು.

ಕೇಂದ್ರ ಸರಕಾರದ 14ನೇ ಹಣಕಾಸು ಯೋಜನೆಯಡಿ ಸ್ಥಳೀಯಾಡಳಿತಗಳಿಗೆ ನೀಡುವ ಅನುದಾನವನ್ನು ಎರಡು ಪಟ್ಟು ಹೆಚ್ಚಿಸಧಿಧಿಲಾಗಿದೆ. ಆದರೆ ಈ ಅನುದಾನಗಳ ಸದ್ಬಳಕೆ ಮಾಡುವುದು ಸ್ಥಳೀಯಾಡಳಿತ ಸಂಸ್ಥೆಗಳ ಪಾತ್ರವಾದರೂ ರಾಜ್ಯ ಸರಕಾರ ವಿದ್ಯುತ್‌ ಬಿಲ್‌ ಬಾಕಿಗೆ ಈ ಅನುದಾನ ಉಪಧಿಯೋಗಿಸುಧಿವಂತೆ ಸುತ್ತೋಲೆ ಹೊರಡಿಸಿರುವುದು ಸರಿಯಲ್ಲ. ಸರಕಾರ ಕೂಡಲೇ ಈ ಸುತ್ತೋಲೆ ಹಿಂಪಡೆಯಬೇಕು ಎಂದರು.

ಉಡುಪಿ ಬಿಜೆಪಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಮಾತನಾಡಿ, ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸ್ಪಧಿರ್ಧಿಸುಧಿತ್ತಿರುವ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಲು ಹಾಗೂ ಉಳಿದಂತೆ ದ್ವಿತೀಯ ಪ್ರಾಶಸ್ತ್ಯದ ಮತಗಳನ್ನು ಯಾವ ಅಭ್ಯರ್ಥಿಗಳಿಗೂ ನೀಡದಂತೆ ಪಕ್ಷದ ಬೆಂಬಲಿತ ಸ್ಥಳೀಯಾಡಳಿತ ಸದಸ್ಯರಿಗೆ ಸ್ವಷ್ಟ ಸೂಚನೆ ನೀಡಲಾಗಿದೆ. (ಕುಂದಾಪ್ರ ಡಾಟ್ ಕಾಂ)

ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯತ್‌ನ ಎಲ್ಲ ಹಂತದ ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸಿದವರು. ಅವರ ಅನುಭವ ಹಾಗೂ ಅವರಲ್ಲಿನ ತರ್ಕಬದ್ಧ ವಿಚಾರ ಮಂಡನೆ ಕಾರಣಗಳಿಂದ ಬಿಜೆಪಿ ಅವರನ್ನು ಮೂರನೇ ಬಾರಿಯೂ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಅವರು ಸುಮಾರು ನಾಲ್ಕು ಸಾವಿರಕ್ಕಿಂತಲೂ ಅಧಿಕ ಮತಗಳನ್ನು ಗಳಿಸಿ ಗೆಲುವು ಸಾಧಿಸಲಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಇರುವ ಆಂತರಿಕ ಗೊಂದಲಗಳು ಈ ಬಾರಿ ನಮಗೆ ಅನುಕೂಲ ವಾತಾವರಣ ಕಲ್ಪಿಸಿವೆ ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ತಿಂಗಳೆ, ಬೈಂದೂರು ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಶ್ಯಾಮಲಾ ಕುಂದರ್‌, ಜಿಲ್ಲಾ ಬಿಜೆಪಿ ಪ್ರಮುಖರಾದ ಜಿಲ್ಲಾ ಉಪಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಗುರುರಾಜ್‌ ಗಂಟಿಹೊಳೆ, ಮಹೇಶ್‌ ಪೂಜಾರಿ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದೀಪಕ್‌ಕುಮಾರ ಶೆಟ್ಟಿ, ಕುಂದಾಪುರ ಕ್ಷೇತ್ರ ಸಮಿತಿ ಅಧ್ಯಕ್ಷ ರಾಜೇಶ್‌ ಕಾವೇರಿ ಮೊದಲಾದವರು ಉಪಸ್ಥಿತರಿದ್ದರು.

Exit mobile version