Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜು: ‘ಉಗಮ – 2025’ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಇಂತಹ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ಹೇಳಿದರು.

ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯ ಸ್ಪರ್ಧೆ ‘ಉಗಮ-2025′ ರ ಅತಿಥಿಯಾಗಿ ಮಾತನಾಡಿದರು.

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ನೇರಳಕಟ್ಟೆ ನಾರಾಯಣ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆ ವಿದ್ಯಾರ್ಥಿಗಳಿಗೆ ತೆರೆದಿಟ್ಟ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ, ಎಸ್ಕ್ಯೂಎಸಿ ಪ್ರತಿನಿಧಿ ನಿರೀಕ್ಷಾ ಉಪಸ್ಥಿತರಿದ್ದರು.

ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು.

ವಾಣಿಜ್ಯ ಉಪನ್ಯಾಸಕರಾದ ಪೂಜಾ ಕುಂದರ್, ಅತಿಥಿಗಳನ್ನು ಪರಿಚಯಿಸಿದರು. ಸತೀಶ್ ಶೆಟ್ಟಿ ಹೆಸ್ಕುತ್ತೂರು ನಿರೂಪಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರೇಷ್ಮಾ ಶೆಟ್ಟಿ ವಂದಿಸಿದರು.

Exit mobile version