Site icon Kundapra.com ಕುಂದಾಪ್ರ ಡಾಟ್ ಕಾಂ

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮದರ್ ತೆರೇಸಾ ಶಾಲೆಯ ರೋಶನ್‌ಗೆ ಚಿನ್ನ ಹಾಗೂ ಬೆಳ್ಳಿಯ ಪದಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ, ಕುಂದಾಪುರ ತಾಲೂಕು ಮಟ್ಟದ 14  ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಮದರ್ ತೆರೆಸಾ ವಿದ್ಯಾಸಂಸ್ಥೆಯ 10ನೇ ತರಗತಿಯ  ಅತ್ಯುತ್ತಮ ಕ್ರೀಡಾಪಟು ರೋಶನ್ ಆರ್.  100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿದ್ದಾನೆ. 200 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ, ಬೆಳ್ಳಿಯ ಪದಕ ಪಡೆದಿದ್ದಾನೆ.

ಈ ಎರಡೂ ವಿಭಾಗಗಳಲ್ಲಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಭಾಗವಹಿಸಲು ಆಯ್ಕೆಯಾಗಿದ್ದಾನೆ. ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಕೀರ್ತಿ ಹೆಚ್ಚಿಸಿರುವ  ರೋಶನ್ ಗೆ ಹಾಗೂ ಅವನಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಶಾಲಾ ಆಡಳಿತ ಮಂಡಳಿ, ಪಿಯು ವಿಭಾಗದ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭಕೋರಿದ್ದಾರೆ.

Exit mobile version