ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ 14 ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮದರ್ ತೆರೆಸಾ ವಿದ್ಯಾಸಂಸ್ಥೆಯ 8ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿ ಕಿಶನ್ ಶೆಟ್ಟಿ ಇವರು ಅತ್ಯುತ್ತಮ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ .
100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ,200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಮೂರು ಚಿನ್ನದ ಪದಕಗಳನ್ನು ಪಡೆದು ,ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಶಿಪ್ ಪಡೆದು ಅದ್ಭುತ ಸಾಧನೆ ಮಾಡಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ ಈ ಪ್ರತಿಭಾವಂತ ಹುಡುಗನಿಗೆ ಹಾಗೂ ಅವನಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಶಾಲಾ ಆಡಳಿತ ಮಂಡಳಿ, ಪಿಯು ವಿಭಾಗದ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

