Site icon Kundapra.com ಕುಂದಾಪ್ರ ಡಾಟ್ ಕಾಂ

ಕರ್ಣಾಟಕ ಬ್ಯಾಂಕ್‌ನಿಂದ ಬಾಳೆಕುದ್ರು ಶ್ರೀ ಮಠದ ಅಭಿವೃದ್ಧಿಗೆ ಆರ್ಥಿಕ ನೆರವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ದೇವಸ್ಥಾನ ಹಾಗೂ ಪೂಜಾ ಮಂದಿರದ ಅಭಿವೃದ್ಧಿಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಠಕ್ಕೆ ಭೇಟಿ ನೀಡಿದ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಡಿ.ಜಿ.ಎಂ ವಾದಿರಾಜ್ ಕೆ ಡಿ.ಡಿಯನ್ನು ಶ್ರೀ ಮಠದ ಶ್ರೀ ವಾಸುದೇವ ಸದಾಶಿವಾಶ್ರಮ ಶ್ರೀಗಳಿಗೆ ಹಸ್ತಾಂತರಿಸಿದರು. ಈ ವೇಳೆ ಶ್ರೀಗಳು ಕೃತಜ್ಞತೆ ಸಲ್ಲಿಸಿ ಆಶ್ರೀವಚನಗೈದು ಮಂತ್ರಾಕ್ಷತೆ ನೀಡಿದರು.

ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಕುಂದಾಪುರ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯಾಯ, ಕರ್ಣಾಟಕ ಬ್ಯಾಂಕ್ ಐರೋಡಿ ಶಾಖಾ ಪ್ರಭಂದಕ ಮಂಜುನಾಥ್ ಶೇಟ್.ಬಿ, ಸಿಬ್ಬಂದಿ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.

Exit mobile version