ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಜಯ ಕರ್ನಾಟಕ ದಿನಪತ್ರಿಕೆಯು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾನೆ.
ಅವನು ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ಎಮ್. ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ.
ವಿದ್ಯಾರ್ಥಿಯ ಸಾಧನೆಗೆ ಶಾಲಾ ಎಸ್‌ಡಿಎಂಸಿ ಬಳಗ, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

