Site icon Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರಮಟ್ಟದ ಯೋಗಾಸನಾ ಸ್ಪರ್ಧೆಯಲ್ಲಿ ಸಂದೀಪ್‌ ಪೂಜಾರಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ ಶಿವಮೊಗ್ಗ ಮತ್ತು ಕಲಾ ಯೋಗಾಸನ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಕಾಡೆಮಿ ತುಮಕೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತುಮಕೂರು ಇವರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 8ನೇ ವರ್ಷದ ರಾಷ್ಟ್ರಮಟ್ಟದ ಯೋಗಾಸನಾ ಸ್ಪರ್ಧೆ 2025-26 ರಲ್ಲಿ ತ್ರಾಸಿ ಗ್ರಾಮ ಪಂಚಾಯತಿನ ಸಿಬ್ಬಂದಿ ಸಂದೀಪ್ ಪೂಜಾರಿ ಅವರು ವಿವಿಧ ಹಂತದ ಸ್ಪರ್ದೆಯಲ್ಲಿ ಪ್ರಥಮ ಹಾಗೂ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟದಿಂದ ಡಿಸೆಂಬರ್ ತಿಂಗಳ ಮಾಲ್ಡೀವ್ಸ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Exit mobile version