Site icon Kundapra.com ಕುಂದಾಪ್ರ ಡಾಟ್ ಕಾಂ

ಚೆಸ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ವರ್ಣಿತಾ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಯಾದಗಿರಿ ಜಿಲ್ಲೆ ಶಹಪುರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ವರ್ಣಿತಾ ವಿ. ಕುಂದರ್ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Exit mobile version