ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳಿಂದ ಕೋಟಿಲಿಂಗೇಶ್ವರ ದೇವಸ್ಥಾನ, ಕೋಟೇಶ್ವರ ಇದರ ದೇವಸ್ಥಾನ ಕೆರೆಯ ಸ್ವಚ್ಛತಾ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು.

ದೇವಸ್ಥಾನಕ್ಕೆ ಆಗಮಿಸಿದ್ದ ತೆಲುಗು ಚಿತ್ರ ನಟ ಶ್ರೀಕಾಂತ್ ಅವರು ಈ ಶ್ರಮದಾನವನ್ನು ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಗಿಣಿ ದೇವಾಡಿಗ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ .ಎಂ. ಗೊಂಡ ಹಾಗೂ ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ ಅರುಣ್ ಎ.ಎಸ್. ಹಾಗೂ ರಾಮಚಂದ್ರ ಆಚಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
75 ಏನ್ ಎಸ್ ಎಸ್ ವಿದ್ಯಾರ್ಥಿಗಳು ದೇವಸ್ಥಾನದ ಕೆರೆಯ ಪರಿಸರವನ್ನು ಸ್ವಚ್ಛಗೊಳಿಸಿದರು.