Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಉಡುಪಿ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಶ್ರೀ ಶಿರೂರು ಮಠದ ಪರ್ಯಾಯ ಸ್ವಾಗತ ಸಮಿತಿಯ ಕುಂದಾಪುರ ವಲಯದ ಪೂರ್ವಭಾವಿ ಸಭೆಯು ಇಲ್ಲಿನ ಕುಂಭಾಶಿ ಆನೆಗುಡ್ಡೆ ದೇವಸ್ಥಾನದ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ಸಭೆ ನೆರವೇರಿತು.

ಸದ್ರಿ ಸಭೆಯಲ್ಲಿ ಶಾಸಕರು ಮಾತನಾಡಿ, ಕುಂದಾಪುರ ವಲಯದಿಂದ ಪರ್ಯಾಯ ಮಹೋತ್ಸವದ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಿ ಶಾಸಕರು ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.

ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನ  ಸ್ವಾಗತ ಸಮಿತಿಯ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಪರ್ಯಾಯ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಹಾಗೂ ಹೊರೆಕಾಣಿಕೆ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಯಾಗುವಂತೆ ಸಹಕಾರ ನೀಡಲು ವಿನಂತಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಆನೆಗುಡ್ಡೆ ಕ್ಷೇತ್ರದ ಧರ್ಮದರ್ಶಿಗಳಾದ ರಮಣ ಉಪಾಧ್ಯ, ವಿಶ್ರಾಂತ ಅಧ್ಯಕ್ಷ ಸೂರ್ಯನಾರಾಯಣ ಉಪಾಧ್ಯ ಪ್ರಚಾರ ಸಮತಿಯ ಸಹಸಂಚಾಲಕ ಮಧುಕರ್ ಮುದ್ರಾಡಿ, ಕಾರ್ಯದರ್ಶಿ ಮೋಹನ್ ಭಟ್, ಜೊತೆ ಕಾರ್ಯದರ್ಶಿಗಳಾದ ಶ್ರೀಕಾಂತ ನಾಯಕ್ ಕಾಪು ಹಾಗೂ ವಿವಿಧ ಧಾರ್ಮಿಕ ಕ್ಷೇತ್ರದ ಮುಖಂಡರು ಮತ್ತು ದೇವಸ್ಥಾನದ ಆಡಳಿತ ಮೊಕ್ತೇಸರರು, ವಿವಿಧ ರಾಜಕೀಯ ಕ್ಷೇತ್ರ ಹಾಗೂ ಸಂಘ-ಸಂಸ್ಥೆ ಧರ್ಮಸ್ಥಳ ಸ್ವಸಹಾಯ ಸಂಘದ ಪದಾಧಿಕಾರಿಗಳು ಭಕ್ತ ಸಮುದಾಯ ಉಪಸ್ಥಿತರಿದ್ದರು.

ಕುಂದಾಪುರ ವಲಯದ ಪ್ರಧಾನ ಸಂಚಾಲಕ ರಾಜೇಶ್ ಕಾವೇರಿ ಸ್ವಾಗತಿಸಿದರು, ಸ್ವಾಗತ ಸಮಿತಿಯ ಜೊತೆ ಕಾರ್ಯದರ್ಶಿ ಸಂದೀಪ್ ಮಂಜ ಧನ್ಯವಾದ ಸಮಪರ್ಪಿಸಿದರು. ಸಹಸಂಚಾಲಕ ಪ್ರಮೋದ್ ಶೆಟ್ಟಿ ಮಂದಾರ್ತಿ ಕಾರ್ಯಕ್ರಮ ನಿರೂಪಿಸಿದರು.

Exit mobile version