Site icon Kundapra.com ಕುಂದಾಪ್ರ ಡಾಟ್ ಕಾಂ

ಗಾರೆ ಕೆಲಸ ಮಾಡುತ್ತಿದ್ದ ವೇಳೆ ಮನೆಯ ಮಹಡಿಯಿಂದ ಕಾಲು ಜಾರಿ ಬಿದ್ದು ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮನೆಯ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕೋಟೇಶ್ವರದಲ್ಲಿ ನಡೆದಿದೆ.

ಬ್ರಹ್ಮಾವರದ ಪೇತ್ರಿ ನಿವಾಸಿ ಸತೀಶ್‌ (53) ಅವರು ಮೃತಪಟ್ಟವರು.

ಅವರು ಕೋಟೇಶ್ವರದಲ್ಲಿ ಮನೆಯೊಂದರ ಮೇಲಿನ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಅಟ್ಟಣಿಗೆಯಿಂದ ಕಾಲು ಜಾರಿ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version