Site icon Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ವಿ ಪ.ಪೂ ಕಾಲೇಜಿನಲ್ಲಿ ಕುಂದಾಪುರ ಮತ್ತು ಬೈಂದೂರು ಬ್ಲಾಕ್ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಭಾರತ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಉಡುಪಿ ಜಿಲ್ಲೆ, ಗ್ರಾಮ ಪಂಚಾಯತ್ ಗಂಗೊಳ್ಳಿ, ಡಾ.ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ, ಅಮೃತಾ ಯುವತಿ ಮಂಡಲ, ಅರ್ಚನಾ ಮಹಿಳಾ ಮಂಡಲ ಮೇಲ್‌ಗಂಗೊಳ್ಳಿ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ಮತ್ತು ಬೈಂದೂರು ಬ್ಲಾಕ್ ಮಟ್ಟದ ಕ್ರೀಡಾಕೂಟ-2025 ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು.

ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳ ಕ್ರೀಡಾಪಟುಗಳು ಇಂತಹ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು.

ಉದ್ಯಮಿ ಸೀತಾರಾಮ ಗಾಣಿಗ ಕೊಡಪಾಡಿ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯೆ ಅಕ್ಕಮ್ಮ, ಯುವತಿ ಮಂಡಲದ ಅಧ್ಯಕ್ಷೆ ಶಕುಂತಲಾ, ಮಹಿಳಾ ಮಂಡಲ ಅಧ್ಯಕ್ಷೆ ಜ್ಯೋತಿ ಉಪಸ್ಥಿತರಿದ್ದರು.

ಯುವಕ ಮಂಡಲ ಅಧ್ಯಕ್ಷ ನಾಗೇಶ ಸ್ವಾಗತಿಸಿದರು. ಯುವತಿ ಮಂಡಲ ಕಾರ್ಯದರ್ಶಿ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು. ಯುವಕ ಮಂಡಲದ ಸ್ಥಾಪಕ ಅಧ್ಯಕ್ಷ ಭಾಸ್ಕರ ಎಚ್.ಜಿ. ವಂದಿಸಿದರು.

Exit mobile version