ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರತಿಕ್ಷಾ ಪಿ. ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.
ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ಎರಡು ದಿನಗಳ ಕಾಲ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿನಿಯು ಪ್ರಕಾಶ್ ಮೊಗವೀರ ಮತ್ತು ನಾಗರತ್ನ ದಂಪತಿಯ ಪುತ್ರಿ.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

