Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್‌ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ:
ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ (ರಿ.) ಮತ್ತು ಸ್ಫೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ (ರಿ.) ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ ಬಾಲಕಿಯರು), ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು.

ಜೂನಿಯರ್ ವಿಭಾಗದ ಬಾಲಕ ಬಾಲಕಿಯರ, ಸಬ್ ಜೂನಿಯರ್ ಬಾಲಕ ಬಾಲಕಿಯರ ಮತ್ತು ಮಹಿಳೆಯರ ಹೀಗೆ ಒಟ್ಟು ಎಲ್ಲಾ 6 ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದು ಸಮಗ್ರ ಚಾಂಪಿಯನ್ ಆಗಿ ಆಳ್ವಾಸ್ ಹೊರಹೊಮ್ಮಿತು. ಬಾಲಕಿಯರ ಸಬ್ ಜೂನಿಯರ್ ವಿಭಾಗದಲ್ಲಿ ಆಳ್ವಾಸ್‌ನ ಮಾನಸ, ಮಹಿಳಾ ವಿಭಾಗದಲ್ಲಿ ಆಳ್ವಾಸ್‌ನ ತನುಷ ಬೆಸ್ಟ್ ಲಿಪ್ಟ್‌ರ್ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.

ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version