Kundapra.com ಕುಂದಾಪ್ರ ಡಾಟ್ ಕಾಂ

ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಸುತ್ತುಪೌಳಿ ನವೀಕರಣಕ್ಕೆ ಚಾಲನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಗೌಡ ಸಾರಸ್ವತ ಸಮಾಜ ಬಾಂಧವರು ಆರಾಧಿಸಿಕೊಂಡು ಬರುತ್ತಿರುವ ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಸುತ್ತುಪೌಳಿ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು.

ದೇವಳದ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಸುತ್ತುಪೌಳಿ ನವೀಕರಣ ಕಾಮಗಾರಿಗೆ ಗೋಕರ್ಣ ಪರ್ತಗಾಳಿ ಜೀವೋತ್ತಮ‌ ಮಠಾಧೀಶ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ವೇದಮೂರ್ತಿ ಗಣಪತಿ ಭಟ್ ರವರ ನೇತ್ರತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಗಣೇಶ ಪ್ರಭು, ಉಪಾಧ್ಯಕ್ಷ ರವಿಕಾಂತ ಶ್ಯಾನುಭಾಗ, ಕಾರ್ಯದರ್ಶಿ ನಾಗರಾಜ ವೆಂಕಟದಾಸ ಪ್ರಭು, ಕೋಶಾಧಿಕಾರಿ ನಾಗರಾಜ ರತ್ನಾಕರ ಪ್ರಭು, ಮಹಿಳಾ ಮಂಡಳಿ ಅಧ್ಯಕ್ಷೆ ಮೇಘಾ ಪೈ, ಕಾರ್ಯದರ್ಶಿ ಅಶ್ವಿನಿ‌ ಕಾಮತ್, ಹಿರಿಯರಾದ ಬಾಬುರಾಯ ಕಾಮತ್, ಪ್ರಕಾಶ ಪ್ರಭು, ವೆಂಕಟೇಶ ಪ್ರಭು, ಚಂದ್ರಕಾಂತ ನಾಯಕ್ ಜಿ.ಎಸ್.ಬಿ.ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Exit mobile version