ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಂಗಿಯ ಮನೆಯಲ್ಲಿ ಅಣ್ಣನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸಿದ್ದಾಪುರದಲ್ಲಿ ಗುರುವಾರ ನಡೆದಿದೆ. ಸಿದ್ದಾಪುರ ಗ್ರಾಮದ ಐರಬೈಲು ನಿವಾಸಿ ಬಸವ ಕುಲಾಲ (66) ಆತ್ಮಹತ್ಯೆ ಮಾಡಿಕೊಂಡವರು.
ಹಲವು ವರ್ಷಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಬಸವ ಕುಲಾಲ್ ನ.13ರಂದು ಸಿದ್ದಾಪುರ ಐರಬೈಲಿನಲ್ಲಿರುವ ತನ್ನ ತಂಗಿಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

