Site icon Kundapra.com ಕುಂದಾಪ್ರ ಡಾಟ್ ಕಾಂ

ತ್ರಿವಿಧ ಜಿಗಿತದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷಾ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀರಕ್ಷಾ 17 ರ ವಯೋಮಾನದ ಬಾಲಕಿಯರ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಜಯಿಸುವುದರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ಈ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿನ ಗೆಲುವಿನೊಂದಿಗೆ, ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಅವರು ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಜನತಾ ಪದವಿಪೂರ್ವ ಕಾಲೇಜು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Exit mobile version