Site icon Kundapra.com ಕುಂದಾಪ್ರ ಡಾಟ್ ಕಾಂ

ಕೆರೆಗೆ ಬಿದ್ದು ಕೃಷಿಕ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಕೆರೆಗೆ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಇತ್ತೀಚಿಗೆ ಆಲೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಲೂರು ಗ್ರಾಮದ ಮಂಜಯ್ಯ ಶೆಟ್ಟಿ (84) ಎಂದು ಗುರುತಿಸಲಾಗಿದೆ.

ಮಂಜಯ್ಯ ಬೆಳಗ್ಗೆ ಜಾನುವಾರುಗಳನ್ನು ಮೇಯಿಸಲು ಹೋಗಿದ್ದು, ಈ ವೇಳೆ ಮನೆಯ ಬಳಿಯ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version