Site icon Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮಾಧ್ಯಮಗಳು ಜನಪರ ಧ್ವನಿಯಾಗಬೇಕು ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಹೇಳಿದರು.

ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಪತ್ರಿಕೋದ್ಯಮ ವಿಭಾಗ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ನಡೆದ “ರಾಷ್ಟ್ರೀಯ ಪತ್ರಿಕಾ ದಿನಾಚರಣೆ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಮಾಧ್ಯಮಗಳು ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳ ಮೇಲೆ ನಿಗಾ ಇಡಬೇಕು. ಪತ್ರಕರ್ತರು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು. ಅಲ್ಲದೆ ಜನರು ಮತ್ತು ಸರ್ಕಾರದ ನಡುವೆ ಸಂಪರ್ಕ ಶಕ್ತಿಯಾಗಿರುವ ಸಾಮರ್ಥ್ಯ ಮಾಧ್ಯಮಗಳಿಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ, ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ. ಜನರ ಧ್ವನಿಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್. ಶೆಣೈ ಅವರು ಭಾರತೀಯ ಪತ್ರಿಕಾ ಮಂಡಳಿ ಕುರಿತು ತಿಳಿಸಿದರು.

ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಇದರ ಸಂಯೋಜಕರಾದ ಸತ್ಯನಾರಾಯಣ, ವಿಜಯಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರಾದ ಜಾನ್ ಡಿಸೋಜಾ ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿದ್ಯಾರ್ಥಿನಿಯರಾದ ಶ್ರಾವ್ಯ ಮತ್ತು ಧೃತಿ ಗೌಡ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರಾದ ಕೀರ್ತಿ ಸತೀಶ್ ಪಟಗಾರ ಅತಿಥಿಗಳನ್ನು ಪರಿಚಯಿಸಿದರು. ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥೆ ಸುಮಲತಾ ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ಸೃಜನ್ ಪೂಜಾರಿ ವಂದಿಸಿದರು.

Exit mobile version