ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ರಕ್ಷಕ ಶಿಕ್ಷಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ರಾಜೇಂದ್ರ ತೋಳಾರ್ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ಸಾಕ್ಷ್ಯ ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ಕಿವಿಮಾತುಗಳನ್ನು ತಿಳಿಸಿದರು.
ಸಭಾಧ್ಯಕ್ಷತೆಯನ್ನು ವಹಿಸಿದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ ಗೊಂಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಡಾ. ಸರೋಜಾ ಎಂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ವಿದ್ಯಾರ್ಥಿಗಳ ಪಾಲಕರುಗಳು ಕೆಲವು ಸಲಹೆಗಳನ್ನು ನೀಡಿದರು. ವಿದ್ಯಾರ್ಥಿನಿ ಭ್ರಂಗ ಉಡುಪ ಮತ್ತು ಧರಣಿ ಪ್ರಾರ್ಥನೆ ಗೈದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ವಿಧ್ಯಾದರ್ ಸರ್ವರನ್ನು ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಸೂರಜ್ ಭಟ್ ಸರ್ವರನ್ನು ವಂದಿಸಿದರು. ರೇಣುಕಾ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

