Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃಕ್ಷ ಮಾತೆಗೆ ನುಡಿ ನಮನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅನಕ್ಷರಸ್ಥೆಯಾಗಿಯೂ ಅವರು ಮಾಡಿದ ಕಾರ್ಯ ಶಿಕ್ಷಣವಂತರಾದ ನಮಗೆಲ್ಲರಿಗೂ ಮಾದರಿ. ಹೀಗಾಗಿ ಅಗಲಿದ ಹಿರಿಯ ಜೀವಕ್ಕೆ ಶಾಂತಿ ಕೋರುವ ಮೂಲಕ ಅವರ ಜೀವನ ಮೌಲ್ಯಗಳನ್ನುವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಹೇಳಿದರು.

ಅವರು ಇಲ್ಲಿನ  ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ವೃಕ್ಷ ಮಾತೆಗೆ ನುಡಿನಮನ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸಿ ನುಡಿ ನಮನದ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ ಎಮ್. ಪೂಜಾರಿ ವಂದಿಸಿ, ರಶ್ಮಿತಾ ಶೆಟ್ಟಿ ನಿರೂಪಿಸಿದರು. ವಿದ್ಯಾರ್ಥಿಗಳು ಮತ್ತು ಬೋಧಕ-ಬೋಧಕೇತರರು ಉಪಸ್ಥಿತರಿದ್ದು ಮೌನ ಪ್ರಾರ್ಥನೆ ಸಲ್ಲಿಸಿದರು.

Exit mobile version