ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರಕಾರ್ಸ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ಕಾಲೇಜಿನಲ್ಲಿ ನಡೆದ “ಆದ್ಯಂತ ಐಟಿ ಫೆಸ್ಟ್ -2025″ನ್ನು ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.
ಮಣಿಪಾಲ ಎಮ್.ಐ.ಟಿ ಸಹಪ್ರಾಧ್ಯಾಪಕರಾದ ಡಾ. ರವಿರಾಜ್ ಹೊಳ್ಳ ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂತಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಕ್ರೀಯಾವಾಗಿ ತೊಡಗಿಸಿಕೊಳ್ಳುವ ಅವಶ್ಯಕತೆಯ ಬಗ್ಗೆ ವಿವರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು .
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ, ಕಂಪ್ಯೂಟರ್ ಸೈನ್ಸ್ ಕೋರ್ಸ್ ಜಾಗತಿಕವಾಗಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ವಿದ್ಯಾರ್ಥಿಗಳಿಗೆ ವಿಫುಲವಾದ ಅವಕಾಶವನ್ನು ಕಲ್ಪಿಸುತ್ತಿದ್ದು ವಿದ್ಯಾರ್ಥಿಗಳು ತಮ್ಮನ್ನು ಕಲಿಕೆಯ ಜೊತೆಗೆ ಇಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಮುಂದಿನ ದಿನಗಳಲ್ಲಿ ಅವರಿಗೆ ಹೆಚ್ಚಿನ ವಿಶ್ವಾಸ ಬೆಳೆಸಿಕೊಳ್ಳುವಲ್ಲಿ ಸಹಾಯಕವಾಗುವುದೆಂದು, ಈ ಹಿನ್ನೆಲೆಯಲ್ಲಿ ಆಯೋಜಿಸಿರುವ ಐಟಿ ಫೆಸ್ಟ್ ನ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಂ ಗೊಂಡ, ಕಾಲೇಜಿನ ಹಳೆ ವಿದ್ಯಾರ್ಥಿ ಶಶಿಧರ್ ಶೆಟ್ಟಿ, ಕಂಪ್ಯೂಟರ್ ಸಾಯನ್ಸ್ ವಿಭಾಗದ ಪ್ರಾಧ್ಯಾಪಕರುಗಳು ಮತ್ತು ಕಾಲೇಜಿನ ಬೋಧಕ- ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಗಣೇಶ್ ಕೆ. ಪ್ರಾಸ್ತವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಸನಮ್ ಕಾರ್ಯಕ್ರಮ ನಿರೂಪಿಸಿ, ನಿಶ್ಮಿತಾ ಸ್ವಾಗತಿಸಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಹಾಗೂ ಕಾರ್ಯಕ್ರಮದ ಸಂಯೋಜಕರಾದ ವಿಜಯಲಕ್ಷ್ಮಿ ಎನ್. ಶೆಟ್ಟಿ ವಂದಿಸಿದರು

